ಕರ್ತವ್ಯದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕಠಿಣ ಕ್ರಮ

ಬೆಂಗಳೂರು : ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿ ಮತ್ತು ಸಹಾಯಕ ನೋಡಲ್ ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಸಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ವರ್ಚುಯಲ್ ಸಭೆ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ಮೇಲ್ವಿಚಾರಣೆ ನೋಡಿಕೊಳ್ಳಲು ನೇಮಕವಾಗಿರುವ ನೋಡಲ್ ಅಧಿಕಾರಿಗಳು ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಿದ್ದರು.

NEWS DESK

TIMES OF BENGALURU