ಎರಡನೇ ಡೋಸ್‌ ಲಸಿಕೆಗಾಗಿ ಪರದಾಟ

ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿತ್ತು. ಮೊದಲ ಸುತ್ತಿನಲ್ಲಿ ಹಿರಿಯರಿಗೆ ಹಾಗೂ ಕೊರೊನಾ ವಾರಿಯರ್ಸ್ ಪಟ್ಟಿಯಲ್ಲಿದ್ದ ಪೊಲೀಸರು ನರ್ಸ್, ವೈದ್ಯರು, ಆಸ್ಪತ್ರೆ ಸಿಬ್ಬಂದಿಗೆ ಕೊಡಲಾಗಿದೆ. ಇದೀಗ ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸದ್ದಿಲ್ಲದೇ ಕೋವಿಶೀಲ್ಡ್ ಬಳಕೆಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೆ 84,06, 980 ಮಂದಿ ಮೊದಲನೇ ಡೋಸ್ ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ. ಎರಡನೇ ಡೋಸ್ ಪಡೆದುಕೊಂಡವರು 18,45,420. ಮೊದಲನೇ ಹಂತದ ಲಸಿಕೆ ಅಭಿಯಾನದಲ್ಲಿ ಜನರು ಪಡೆದಿರುವುದು ಕೋವ್ಯಾಕ್ಸಿನ್ ಮಾತ್ರ. ಅದಾಗಲೇ 18 ಲಕ್ಷ ಮಂದಿ ಎರಡನೇ ಡೋಸ್ ಕೋವ್ಯಾಕ್ಸಿನ್ ಪಡೆದವರೂ ಸೇಫ್. ಮೊದಲೇ ಡೋಸ್ ಕೋವ್ಯಾಕ್ಸಿನ್ ಪಡೆದು ಇದೀಗ 28 ದಿನ ಮುಗಿದಿದ್ದು, ಎರಡನೇ ಡೋಸ್ ಲಸಿಕೆಗಾಗಿ ಪರದಾಡುತ್ತಿದ್ದಾರೆ.

NEWS DESK

TIMES OF BENGALURU