ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಕೆ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ದಿನಾಂಕ 11-05-2021ರ ಒಳಗೆ ಸಿಸಿಟಿವಿ ಅಳವಡಿಸಿಕೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಎಲ್ಲಾ ಜಿಲ್ಲಾ ಶಸ್ತ್ರ ಚಿಕಿತ್ಸಕರು, ವೈದ್ಯಕೀಯ ಅಧೀಕ್ಷಕರು, ನೋಡಲ್ ಅಧಿಕಾರಿಗಳು ಹಾಗೂ ಆಡಳಿತ ವೈದ್ಯಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ದಿನಾಂಕ 07-05-2021ರಂದು ಕೋವಿಡ್-19ರ ನಿಯಂತ್ರಣ ಹಾಗೂ ಮೇಲ್ವಿಚಾರಣೆ ಸಭೆಯಲ್ಲಿ ಸೂಚಿಸಿದಂತೆ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ದಿನಾಂಕ 11-05-2021ರ ಒಳಗೆ ಸಿಸಿಟಿವಿ ಅಳವಡಿಸಿಕೊಳ್ಳಲು ಸದರಿ ಆಸ್ಪತ್ರೆಗಳ ನಿರ್ದೇಶಕರು, ವೈದ್ಯಕೀಯ ಮಹಾ ವಿದ್ಯಾಲಯ, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಿದೆ. ಈಗಾಗಲೇ ಸಿಸಿಟಿವಿಗೆ ಸಂಬಂಧಿಸಿದ ತಾಂತ್ರಿಕ ವೈಶಿಷ್ಟಗಳ ವಿವಿರ ನೀಡಲಾಗಿದ್ದು, ಮತ್ತೊಮ್ಮೆ ಈ ಸುತ್ತೋಲೆಯೊಂದಿಗೆ ನೀಡಲಾಗಿದೆ.

NEWS DESK

TIMES OF BENGALURU