ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಲಾಕ್ಡೌನ್ ಮೊರೆ ಹೋಗಿದೆ. ಸೋಮವಾರದಿಂದ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಾಗುತ್ತಿದ್ದು, ಸದ್ಯ ಇಂದು, ನಾಳೆ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ ಜನಸಾಮಾನ್ಯರು ಸೋಮವಾರದಿಂದ ಲಾಕ್ಡೌನ್ ಅಂತೇಳಿ ಇಂದು ಬೇಕಾಬಿಟ್ಟಿಯಾಗಿ ರಸ್ತೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇಂದು, ನಾಳೆ ಕೆಲವು ಚಟುವಟಿಕೆಗಳಿಗೆ ನಿರ್ಬಂಧವೇರಲಾಗಿದೆ. ವೀಕೆಂಡ್ ನಲ್ಲಿ ಕಡಿಮೆ ಚಟುವಟಿಕೆಗೆ ಅವಕಾಶ ಇದೆ. ಸೋಮವಾರದಿಂದ ಕಟ್ಟುನಿಟ್ಟಿನ ನಿಯಮ ಜಾರಿಯಾಗಲಿದೆ ಎಂದರು.
NEWS DESK
TIMES OF BENGALURU