ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ರಾಕೇಶ್ ಸಿಂಗ್

ಬೆಂಗಳೂರು : ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ‌ ನಡೆಯುತ್ತಿರುವ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಇಂದು ಪರಿವೀಕ್ಷಣೆ‌ ಮಾಡಿದರು.ನಗರದ ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಮಿಲ್ಲಿರ್ಸ್ ರಸ್ತೆ, ಕ್ವೀನ್ಸ್ ರಸ್ತೆ, ಬ್ರಿಗೇಡ್ ರಸ್ತೆ, ಡಿಕೆನ್ ಸನ್ ರಸ್ತೆ, ಕಸ್ತೂರಬಾ ರಸ್ತೆ, ಕಾಮರಾಜ್ ರಸ್ತೆ, ಲ್ಯಾವೆಲ್ಲೆ ರಸ್ತೆಗಳ ಕಾಮಗಾರಿಗಳನ್ನು ಬಿಬಿಎಂಪಿ ಆಡಳಿತಾಧಿಕಾರಿಗಳೂ ಆದ ರಾಕೇಶ್ ಸಿಂಗ್ ಪರಿಶೀಲಿಸಿದರು.

NEWS DESK

TIMES OF BENGALURU