ಕೊರೋನಾ ಸಂತ್ರಸ್ತ ಕುಟುಂಬದವರಿಗೆ ಆರ್ಥಿಕ ನೆರವು

ಬೆಂಗಳೂರು: : ಕೋವಿಡ್ ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬಗಳಿಗೆ ನೆರವಾಗುವುದು ಮಾದರಿ ಕಾರ್ಯವಾಗಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದರು . ಕ್ಷೇತ್ರದ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಹಾಯಧನ ವಿತರಣೆ ಮಾಡಿ ಮಾತನಾಡಿದರು ಕುಟುಂಬದ ನಿರ್ವಹಣೆಯ ಗುರುತರ ಜವಾಬ್ದಾರಿ ಹೊತ್ತಿದ್ದ ಸದಸ್ಯರು ಕ್ರೂರಿ ಕೊರೋನಾಗೆ ಬಲಿಯಾಗುತ್ತಿರುವುದನ್ನು ಮನಗಂಡು ಸಚಿವ ಸೋಮಶೇಖರ್ ಅವರು ಸಂತ್ರಸ್ತ ಕುಟುಂಬಗಳಿಗೆ ಆಸರೆಯಾಗಿದ್ದಾರೆ.

NEWS DESK

TIMES OF BENGALURU