ಮನೆಯಲ್ಲೇ ಉಳಿದು ಸರ್ಕಾರಕ್ಕೆ ಸಹಕಾರ ನೀಡಿ

ಬೆಂಗಳೂರು: ಇಂದಿನಿಂದ ಪ್ರಾರಂಭವಾಗಲಿರುವ ಲಾಕ್ ಡೌನ್‍ನ ಸದುದ್ದೇಶವನ್ನು ಅರ್ಥೈಸಿಕೊಂಡು ಜನತೆ ಸ್ವಯಂ ಪ್ರೇರಿತರಾಗಿ ಸಹಕರಿಸಬೇಕೆಂದು ಸಚಿವ.ಎಸ್.ಸುರೇಶ್ ಕುಮಾರ್ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಕೋವಿಡ್ ಸೋಂಕಿತರಿಗೆ ಹೊಸದಾಗಿ ಪ್ರಾರಂಭಿಸಲಾಗಿರುವ ಇಪ್ಪತ್ತು ಆಕ್ಸಿಜನ್ ಪೂರಕ ಹಾಸಿಗೆಗಳ ಕೋವಿಡ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸೋಂಕಿನ ಸರಪಳಿಯನ್ನು ತುಂಡರಿಸುವಲ್ಲಿ ಲಾಕ್‌ಡೌನ್ ಗೆ ನಾಗರಿಕರು‌ ಸಹಕರಿಸುವುದು‌ ಅತ್ಯಂತ ಅವಶ್ಯಕವಾಗಿದೆ ಎಂದರು.

ಕೋವಿಡ್ ಸರಪಳಿಯನ್ನು ತುಂಡರಿಸದಿದ್ದಲ್ಲಿ ಸಾರ್ವಜನಿಕ‌ ಆರೋಗ್ಯ ವ್ಯವಸ್ಥೆ ತೀವ್ರವಾಗಿ ಹದಗೆಡಲಿದೆ. ಜನತೆ ತಮ್ಮ ಹಾಗೂ ಸಮಾಜದ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿಯೇ ಉಳಿದು ಸಹಕಾರ ನೀಡಬೇಕು. ಗ್ರಾಮಾಂತರ ಪ್ರದೇಶಗಳ ನಾಗರಿಕರೂ ಲಾಕ್ ಡೌನ್ ಕುರಿತಂತೆ ವಿಶೇಷ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

NEWS DESK

TIMES OF BENGALURU