ರಾಜಧಾನಿಯಲ್ಲಿ ಕಿಲ್ಲರ್ ಕೊರೋನಾ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ಹಿಂದಿನ ಎಲ್ಲಾ ದಾಖಲೆ ಉಡೀಸ್ ಮಾಡುವಂತೆ ಮತ್ತೆ ಕಿಲ್ಲರ್ ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾದಂತ 596 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 32,188 ಜನರು ಸೇರಿದಂತೆ ಇದುವರೆಗೆ 13,83,285 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

NEWS DESK

TIMES OF BENGALURU