ಅಗತ್ಯ ಸೇವೆಯ ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಿ

ಬೆಂಗಳೂರು : ರಾಜ್ಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವಂತ 7 ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಇತರೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಮಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

NEWS DESK

TIMES OF BENGALURU