ಕೋವಿಡ್ ಸೆಂಟರ್ ಆಗಿ ಐಟಿಐ ಆಸ್ಪತ್ರೆ ಪರಿವರ್ತನೆ

ಬೆಂಗಳೂರು : ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ (ಕೇಂದ್ರ) ಸ್ವಾಮ್ಯದ ಐಟಿಐ ಆಸ್ಪತ್ರೆಯನ್ನು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಪುನಶ್ಚೇತನಗೊಳಿಸಿ ತಾತ್ಕಾಲಿಕವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಸಚಿವರು ತಾವು ಈಗಾಗಲೇ ಸಂಬಂಧಪಟ್ಟ ಸಚಿವರಿಗೆ (ರವಿಶಂಕರ್ ಪ್ರಸಾದ್) ಈ ಬಗ್ಗೆ ಪತ್ರ ಬರೆದಿದ್ದು ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರುವ ಆಸ್ಪತ್ರೆಗಳು ಸಾಲುತ್ತಿಲ್ಲ. ಹೆಚ್ಚೆಚ್ಚು ತಾತ್ಕಾಲಿಕ ಕೋವಿಡ್ ಕೇಂದ್ರಗಳನ್ನು ಕಲ್ಪಿಸುವುದು ಅನಿವಾರ್ಯವಾಗಿದೆ ಎಂದರು.

NEWS DESK

TIMES OF BENGALURU