ಲಾಕ್ ಡೌನ್ ಹಿನ್ನೆಲೆ ವಿಮಾನ ಹಾರಾಟ ರದ್ದು

ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯಾದ್ಯಂತ ಮೇ 24ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಮತ್ತು ಬೆಂಗಳೂರಿನಿಂದ ನಿರ್ಗಮಿಸುವ 53 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ. ಪರಿಸ್ಥಿತಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆಗಳು ತಿಳಿಸಿವೆ. ಮೇ 24ರವರೆಗೆ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರಬೇಕಿದ್ದ ಮತ್ತು ಬೆಂಗಳೂರಿನಿಂದ ಹೊರಡಬೇಕಿದ್ದ ಸುಮಾರು 53 ವಿಮಾನಗಳ ಹಾರಾಟವನ್ನು ವಿಮಾನ ಸಂಸ್ಥೆಗಳು ರದ್ದುಗೊಳಿಸಿದೆ.

NEWS DESK

TIMES OF BENGALURU