ಬೇಕಾಬಿಟ್ಟಿ ಲಾಠಿ ಚಾರ್ಜ್ ಗೆ ಬ್ರೇಕ್..!!

ಬೆಂಗಳೂರು: ಕೊರೋನಾ ಸೋಂಕಿನ ಮಾರ್ಗಸೂಚಿ ಕ್ರಮಗಳನ್ನು ಉಲ್ಲಂಘಿಸಿದಂತ ವಾಹನ ಸವಾರರ ಮೇಲೆ ಅನೇಕ ಕಡೆಯಲ್ಲಿ ಪೊಲೀಸರು ಲಾಠಿ ಬೀಸಿದ್ದರು. ಹೀಗಾಗಿ ಅನೇಕ ಸಾರ್ವಜನಿಕರು ಇದಕ್ಕೆ ಆಕ್ಷೇಪ ಕೂಡ ವ್ಯಕ್ತ ಪಡಿಸಿದ್ದರು. ಇದರಿಂದಾಗಿ ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಿ. ಇದರ ಬದಲಾಗಿ ಯಾವುದೇ ಬಲಪ್ರಯೋಗ ಮಾಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

NEWS DESK

TIMES OF BENGALURU