ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಮೇ. 10 ರಿಂದ ಮೇ. 24 ರವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU