ಬೆಂಗಳೂರು : ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ದುಷ್ಪರಿಣಾಮ ನೀಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳಿಗೆ ಪ್ರತ್ಯೇಕ ಆರೈಕೆ ಕೇಂದ್ರ ಆರಂಭ ಮಾಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು. ಜಿಕೆವಿಕೆಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಹಾಗೂ ಸೋಂಕಿತರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಮೂರನೇ ಅಲೆ ಎದುರಿಸಲು ನಾವು ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದೇವೆ, ಮಕ್ಕಳ ಆರೋಗ್ಯ ದೃಷ್ಠಿಯಿಂದ 3-4 ದಿನಗಳ ಒಳಗೆ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ ಎಂದರು.
NEWS DESK
TIMES OF BENGALURU