ಸಿಇಟಿ ಎಕ್ಸಾಂ ಮುಂದೂಡಿಕೆ

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ. ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

NEWS DESK

TIMES OF BENGALURU