ಸರ್ಕಾರದ ವಿರುದ್ಧ ಧರಣಿ ನಡೆಸಿದ ಕಾಂಗ್ರೇಸ್

ಬೆಂಗಳೂರು: ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಗೃಹ ಸಚಿವ ರಾಮಲಿಂಗ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರ ನಾಯಕರು ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೋವಿಡ್ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಧರಣಿ ನಡೆಸಿದರು.

NEWS DESK

TIMES OF BENGALURU