ಕೇಂದ್ರದ ವಿರುದ್ಧ ಕಿಡಿ ಕಾರಿದ ಎಚ್ ಡಿ ಕೆ

ಬೆಂಗಳೂರು : ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು.‌ ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್​ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇ. 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ ಎಂದಿದ್ದಾರೆ. ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

NEWS DESK

TIMES OF BENGALURU