ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯ ಸರ್ಕಾರ ಕೂಡ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಇದರ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು. ಸಭೆಯಲ್ಲಿ ಲಾಕ್ ಡೌನ್ ಕುರಿತಾದ ಕ್ರಮ, ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ನೀಡಬೇಕಾದ ಸೌಲಭ್ಯ ಕುರಿತಂತೆ ಕೂಡ ಚರ್ಚೆ ನಡೆಯಿತು. ಅಧಿಕಾರಿಗಳು ಹಾಗೂ ಸಚಿವರಿಂದ ಕೆಲವು ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ ಕೆಲವು ಸೂಚನೆಗಳನ್ನು ನೀಡಿದ್ದಾರೆ .
NEWS DESK
TIMES OF BENGALURU