ಓಲಾ ಕ್ಯಾಬ್ ಮೂಲಕ ಮನೆಯ ಬಾಗಿಲಿಗೆ ಆಮ್ಲಜನಕ

ಬೆಂಗಳೂರು: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್ ಸೋಂಕಿತರಿಗೆ ಮನೆ ಬಾಗಿಲಿಗೆ ಓಲಾ ಕ್ಯಾಬ್‍ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಮಹತ್ವದ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು. ಮೊಟ್ಟ ಮೊದಲಿಗೆ ಬೆಂಗಳೂರು ನಗರದಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ರಾಜ್ಯ ಸರಕಾರದ ಜತೆ ಗಿವ್ ಇಂಡಿಯಾ ಹಾಗೂ ಓಲಾ ಕ್ಯಾಬ್ ಕಂಪೆನಿಗಳು ಕೈಜೋಡಿಸಿವೆ ಎಂದು ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

NEWS DESK

TIMES OF BENGALURU