ಬೆಡ್ ಕೊರತೆ ನೀಗಿಸಲು ಸ್ಟೆಪ್ ಡೌನ್ ಆಸ್ಪತ್ರೆಗಳ ನಿರ್ಮಾಣ

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಎದುರಾಗುತ್ತಿರುವ ಹಾಸಿಗೆಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಈಗಾಗಲೇ 1,200 ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನು 2 ಸಾವಿರ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಕೋವಿಡ್ ಬೆಡ್ ಉಸ್ತುವಾರಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಸಂಘ, ಹೊಟೇಲ್ ಉದ್ಯಮಿಗಳ ಸಂಘ ಹಾಗೂ ಬಿಬಿಎಂಪಿ ಅಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಮಾತನಾಡಿದ ಅವರು, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳ ಪಕ್ಕದಲ್ಲಿಯೇ ದೊಡ್ಡದೊಡ್ಡ ಹೊಟೇಲುಗಳಿವೆ. ಈ ಹೊಟೇಲ್‍ಗಳಲ್ಲಿ ರೂಂಗಳನ್ನು ಪಡೆದು ಅಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಎಂದರು.

NEWS DESK

TIMES OF BENGALURU