ಬೆಂಗಳೂರು: ಕೋರ್ಟ್ ಸೂಚನೆಯಿದ್ದರೂ ರಾಜ್ಯಕ್ಕೆ ಕಡಿಮೆ ಪ್ರಮಾಣದ ಆಕ್ಸಿಜನ್ ನೀಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ ಎಂದು ಎಚ್ ಡಿಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
NEWS DESK
TIMES OF BENGALURU