ಕರುನಾಡಲ್ಲಿ ಕಿಲ್ಲರ್ ಕೊರೋನಾಗೆ 344 ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಹಾಮಾರಿಗೆ ಇಂದು ರಾಜ್ಯದಲ್ಲಿ 344 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 35297 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2088488 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ( ಈವರೆಗೆ ಒಟ್ಟು 20712 ಸಾವು) ಇಂದು ಬೆಂಗಳೂರಿನಲ್ಲಿ ಕೊರೋನಾ ಮಾಹಾಸ್ಪೋಟವಾಗಿದ್ದು 15191 ಜನರಿಗೆ ಕೊರೋನಾ ತಗುಲಿದ್ದು, 161 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1014996 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 9125 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

NEWS DESK

TIMES OF BENGALURU