ಐಐಎಸ್‍ಸಿ ಲಸಿಕೆ ಉಳಿದ ಲಸಿಕೆಗಳಿಗಿಂತ ಪರಿಣಾಮಕಾರಿ

ಬೆಂಗಳೂರು : ಕೋವಿಡ್ ಗೆ ಲಸಿಕೆ ಅಭಿವೃದ್ಧಿಪಡಿಸಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್( IISC)ನಲ್ಲಿ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಪ್ರೊ.ರಂಗರಾಜನ್ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಮಾಹಿತಿ ನೀಡಿದ್ದಾರೆ. ಸದ್ಯ ಇರುವ ಲಸಿಕೆಗಳಿಗಿಂತ ಉತ್ತಮ ಪರಿಣಾಮ ಫಲಿತಾಂಶಗಳನ್ನು IISC ಲಸಿಕೆ ತೋರಿಸುತ್ತಿರುವುದು ಒಳ್ಳೆಯ ಸುದ್ದಿ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಐಐಎಸ್‍ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.

NEWS DESK

TIMES OF BENGALURU