ನನ್ನ ಜನ್ಮ ದಿನಾಚರಣೆ ಆಚರಿಸೋದು ಬೇಡ

ಬೆಂಗಳೂರು : ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಪತ್ರಿಕಾ ಹೇಳಿಕೆಯಲ್ಲಿ ಶಿವಕುಮಾರ್ ಅವರು ‘ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೊರೋನಾ ರುದ್ರತಾಂಡವ ಆಡುತ್ತಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ವಿಹಿತವಲ್ಲ. ಹೀಗಾಗಿ ಈ ಬಾರಿ ನಾನೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ ಎಂದಿದ್ದಾರೆ.