ಲಸಿಕೆ ಖರೀದಿಗೆ ಸರ್ಕಾರಕ್ಕೆ 100 ಕೋಟಿ ನೀಡುತ್ತೇವೆ

ಬೆಂಗಳೂರು: ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ನೀಡಲಾಗುತ್ತಿರುವ ಲಸಿಕೆ ಖರೀದಿಗೆ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್ ಸಹಾಯ ಹಸ್ತ ಚಾಚಿದೆ.

ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ, ವಿರೋಧ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಪ್ರತಿ ಶಾಸಕರು ಒಂದು ಕೋಟಿ ರೂಪಾಯಿಗಳನ್ನು ನೀಡುವ ಮೂಲಕ 100 ಕೋಟಿ ರೂಪಾಯಿ ಸಂಗ್ರಹ ಮಾಡಿ ಸರ್ಕಾರಕ್ಕೆ ನೀಡುತ್ತೇವೆ ಎಂದು ಹೇಳಿದರು.

NEWS DESK

TIMES OF BENGALURU