ಬೆಂಗಳೂರು:ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
NEWS DESK
TIMES OF BENGALURU