ರಾಧೆ ಸಿನಿಮಾ ಲೀಕ್; ಸಲ್ಲು ಫ್ಯಾನ್ಸ್ ಬೇಸರ

ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ ಯುವರ್ ಮೋಸ್ಟ್ ವಾಂಟೆಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಕೊರೊನಾ ಹಾವಳಿಯ ನಡುವೆಯೂ ಅಭಿಮಾನಿಗಳನ್ನು ರಂಜಿಸಲು ಸಲ್ಲು ರಾಧೆ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಸಲ್ಮಾನ್ ಸಿನಿಮಾ ಅಂದ್ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿರುತ್ತೆ.

ರಾಧೆ ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರಂತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಮೊದಲ ದಿನವೇ ರಾಧೆ ಸಿನಿಮಾ ಲೀಕ್ ಆಗಿದೆ. ಲೀಕ್ ಆಗಿರುವ ಹೆಚ್ ಡಿ ಪ್ರಿಂಟ್ ವೈರಲ್ ಆಗಿದೆ. ಲಾಕ್ ಡೌನ್ ಇರುವ ಕಡೆ ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡಿದ್ರೆ, ಲಾಕ್ ಡೌನ್ ಇಲ್ಲದೆ ಇರುವ ಕಡೆ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ.ಆದರೆ ಮೊದಲ ದಿನವೇ ಲೀಕ್ ಆಗಿರುವುದು ಸಲ್ಲು ಅಭಿಮಾನಿಗಳಿಗೆ ಬೇಸರ ತಂದಿದೆ.

NEWS DESK

TIMES OF BENGALURU