ಲಾಕ್ ಡೌನ್ ವಿಸ್ತರಿಸುವುದು ಸೂಕ್ತ: ತಜ್ಞರ ಸಲಹೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಮೇ 24ರ ನಂತರದಲ್ಲಿ ಮತ್ತೆ ಎರಡು ವಾರ ಲಾಕ್‌ಡೌನ್‌ ವಿಸ್ತರಿಸುವುದು ಸೂಕ್ತ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಸರ್ಕಾರಕ್ಕೆ ಸಲಹೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಮೇ 20ರ ನಂತರ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವ ನಿರೀಕ್ಷೆಯಿದೆ ಎಂದು ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ತಿಳಿಸಿದ್ದಾರೆ. ಮೇ 17ರ ಬಳಿಕ ಬೆಂಗಳೂರಿನಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದ್ದು, ಅದಾಗಿ ಮೂರ್ನಾಲ್ಕು ದಿನಗಳ ನಂತರ ಜಿಲ್ಲಾಕೇಂದ್ರಗಳಲ್ಲಿ ಸೋಂಕಿತ ಪ್ರಕರಣಗಳು ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU