ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮೊದಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಕೊರೊನಾ ಸೋಂಕು ಜಾಸ್ತಿಯಾದ ಹಿನ್ನೆಲೆಯಲ್ಲಿ ಮೊದಲ ಲಾಕ್ ಡೌನ್ ಮೇ. 12 ಕ್ಕೆ ಮುಗಿಯುವ ಮೊದಲೇ ಅದನ್ನು ಮೇ. 24 ಕ್ಕೆ ವಿಸ್ತರಣೆ ಮಾಡಿದರು. ಇದೀಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೀಡಿರುವ ಹೇಳಿಕೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಸುಳಿವು ನೀಡಿದೆ

ಲಾಕ್ ಡೌನ್ ವಿಸ್ತರಣೆ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ್‌ ಬೊಮ್ಮಾಯಿ, ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ಮಾಡಿಲ್ಲ. ಆದರೆ ಕೇಂದ್ರ ಸೇರಿದಂತೆ ತಜ್ಞರು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ಅನಿವಾರ್ಯ ಎಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಆ ಸಂದರ್ಭದಲ್ಲಿ ನ ಪರಿಸ್ಥಿತಿ ಹಾಗೂ ಕೋವಿಡ್ ಅಂಕಿ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

NEWS DESK

TIMES OF BENGALURU