ರಾಜ್ಯದ ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ತೌಕ್ತೆ ಚಂಡಮಾರುತ ಹಿನ್ನಲೆಯಲ್ಲಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರಾದ ಆರ್ ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶದಲ್ಲಿ ಎಚ್ಚರಿಕೆ ತಗೆದುಕೊಳ್ಳುವ ಬಗ್ಗೆ ‌ ಹಾಗೂ ರಾಜ್ಯದಲ್ಲಿ ಎದುರಾಗುವ ಅವಘಡಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ತೌಕ್ತೆ ಚಂಡಮಾರುತ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದೆ. ರಾಜ್ಯದಿಂದ ಕೇವಲ 200 ಕಿ.ಮೀ ದೂರದಲ್ಲಿದೆ. ಹವಾಮಾನ ಕೇಂದ್ರದಿಂದ ಪ್ರತಿ ನಿಮಿಷಕ್ಕೂ ಮಾನಿಟರ್ ಆಗ್ತಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಕೇಂದ್ರವಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉತ್ತರ ಕನ್ನಡಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. 60 ಕಿ.ಮೀ. ವೇಗದಲ್ಲಿ ಇದು ಬೀಸುತ್ತಿದೆ. ಮೇ 18 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ತಗ್ಗುಪ್ರದೇಶಗಳಿಂದ ಜನರ ಸ್ಥಳಾಂತರಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಮೂರು ಜಿಲ್ಲೆಗಳಲ್ಲಿ 8 ರಿಲೀಫ್ ಕ್ಯಾಂಪ್ ಮಾಡಲಾಗಿದೆ. ಕಷ್ಟಕ್ಕೆ ಸಿಲುಕಿದವರಿಗೆ ಅಲ್ಲಿ ಪುನರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆರ್. ಅಶೋಕ್ ಹೇಳಿದರು.

NEWS DESK

TIMES OF BENGALURU