ಬೆಂಗಳೂರು: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಡ್ಗಳ ಕೊರತೆ ನೀಗಿಸುವ ಸಲುವಾಗಿ ಕೋವಿಡ್ ಕೇರ್ ಸೆಂಟರ್ಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಥಣಿಸಂದ್ರದಲ್ಲಿರುವ ಹಜ್ ಭವನವನ್ನು ಕೋವಿಡ್ ಹಾರೈಕೆ ಕೇಂದ್ರವಾಗಿ ಮಾರ್ಪಾಡು ಮಾಡಲಾಗಿದೆ. ಹೀಗಾಗಿ ಕಂದಾಯ ಸಚಿವ ಆರ್.ಅಶೋಕ್ ಹಜ್ ಭವನಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಒಟ್ಟು 430 ಬೆಡ್ಗಳಿರುವ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಲಾಗಿದ್ದು, ನಾಳೆಯಿಂದ ಇಲ್ಲಿಗೆ ಸೋಂಕಿತರನ್ನು ದಾಖಲಿಸಲಾಗುವುದು. ಆಕ್ಸಿಜನ್ ಕೊರತೆಯಿಂದ ಅಂಬ್ಯುಲೆನ್ಸ್ ಗಳಲ್ಲಿ ಕಾಯುವುದು, ಮನೆಯಲ್ಲಿ ಕಾಯುವುದು ನಿಲ್ಲಬೇಕು ಅದಕ್ಕಾಗಿ ಈ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಐಸಿಯು ಆನ್ ವೀಲ್ಸ್ ವ್ಯವಸ್ಥೆಯಡಿ ಬಸ್ ಗಳಲ್ಲಿ ಆಕ್ಸಿಜನ್ ಕೊಡುತ್ತಿದ್ದೇವೆ. ಇನ್ನೂ ಎರಡ್ಮೂರು ದಿನದಲ್ಲಿ ಆಕ್ಸಿಜನ್ ಬೆಡ್ ಕೊರತೆ ಇರಬಾರದು ಆ ರೀತಿ ಕಾರ್ಯಾಚರಣೆ ನಡೆಸುತ್ತಾ ಇದ್ದೇವೆ ಎಂದು ಕಂದಾಯ ಸಚಿವ ಆರ್ ಆಶೋಕ್ ತಿಳಿಸಿದರು.
NEWS DESK
TIMES OF BENGALURU