ಕರ್ನಾಟಕದ ಡಿಸಿಗಳ ಜೊತೆ ಮೋದಿ ಸಂವಾದ

ಬೆಂಗಳೂರು; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ವಿವಿಧ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಮೇ 18ರ ಮಂಗಳವಾರ ಪ್ರಧಾನಿ ಮೋದಿ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಲಿದ್ದಾರೆ. ಸಂಬಂಧಪಟ್ಟ ಜಿಲ್ಲೆಗಳ ಅಗತ್ಯ ಮಾಹಿತಿಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಹಿತಿ ರವಾನೆ ಮಾಡಲಾಗಿದೆ.

NEWS DESK

TIMES OF BENGALURU