ಬ್ಲಾಕ್ ಫಂಗಸ್ ಗೆ ಬೌರಿಂಗ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು : ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ. ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು.ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದರು.

NEWS DESK

TIMES OF BENGALURU