ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ರದ್ದು?

ಬೆಂಗಳೂರು: ಕೊರೊನಾ ಹೆಮ್ಮಾರಿಯ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದ್ದು, ಯಾವಾಗ ಪರೀಕ್ಷೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತಲೆಕಡೆಸಿಕೊಂಡಿದೆ. ಎರಡು ಪರೀಕ್ಷೆಗಳನ್ನು ಮುಂದೂಡಿರುವ ಶಿಕ್ಷಣ ಇಲಾಖೆ, ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸಿಲ್ಲ.

ಈ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದು, ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು‌ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ರದ್ದು ಕುರಿತು, ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವ ಎಸ್.ಸುರೇಶ್ ಕುಮಾರ್, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

NEWS DESK

TIMES OF BENGALURU