ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದರೂ ಕೂಡ ಬೇರೆ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳವಾಗುತ್ತಿದೆ.
ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎನ್ನಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವುದು ನಿಶ್ಚಿತ ಎನ್ನಲಾಗಿದೆ. ಅಲ್ಲದೇ ಸಚಿವರು, ಶಾಸಕರು ಕೂಡ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ತಿಂಗಳಾಂತ್ಯದವರೆಗೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.
NEWS DESK
TIMES OF BENGALURU