ಕೋವಿಡ್ ಸೋಂಕಿತರ ನೆರವಿಗೆ ನಿಂತ ಐರಾವನ್ ಚಿತ್ರತಂಡ

ಬೆಂಗಳೂರು: ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಸಹಯೋಗದಲ್ಲಿ ಐರಾವನ್ ಚಿತ್ರತಂಡ ಇದೀಗ ಸೇವೆಗೆ ಇಳಿದಿದೆ. ಚಿತ್ರದ ನಿರ್ಮಾಪಕ ಡಾ. ನಿರಂತರ್ ಗಣೇಶ್ ಮತ್ತು ಚಿತ್ರ ನಾಯಕ ಜಯರಾಮ್ ಕಾರ್ತಿಕ್ (ಜೆಕೆ) ಮತ್ತು ನಟ ವಿವೇಕ್ ಆಕ್ಸಿಜನ್​ ವಾಹನವನ್ನು ಭಾನುವಾರ ಬ್ಯಾಟರಾಯನಪುರ ವ್ಯಾಪ್ತಿಗೆ ನೀಡಿದ್ದಾರೆ. ಅದರ ಜತೆಗೆ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್, ಒಂದಷ್ಟು ಔಷಧಗಳನ್ನೂ ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಆರೆಸ್ಸೆಸ್​ನ ಪ್ರಾದೇಶಿಕ ಜನರಲ್ ಸೆಕ್ರೆಟರಿ ಎನ್ ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯದ ಆರೋಗ್ಯ ಭಾರತಿಯ ಜಂಟಿ ಕಾರ್ಯದರ್ಶಿ ಗಂಗಾಧರನ್ ಚಾಲನೆ ನೀಡಿದ್ದಾರೆ.

NEWS DESK

TIMES OF BENGALURU