ಕೋನದಾಸಪುರದಲ್ಲಿ ಬಹುಪಯೋಗಿ ಟೌನ್ ಶಿಪ್ ನಿರ್ಮಾಣ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ಕೋನದಾಸಪುರದಲ್ಲಿ ಸುಸಜ್ಜಿತವಾದ ಬಹುಪಯೋಗಿ ಟೌನ್ ಶಿಪ್ ಅನ್ನು ನಿರ್ಮಾಣ ಮಾಡಲು ಬಿಡಿಎ ನಿರ್ಧರಿಸಿದೆ.  ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಯೋಜನೆಯ ಕಾರ್ಯಗತಕ್ಕೆ ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.

ಸಭೆಯ ನಂತರ ಈ ಬಗ್ಗೆ ವಿವರಣೆ ನೀಡಿದ ವಿಶ್ವನಾಥ್ ಅವರು, ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಟೌನ್ ಶಿಪ್ ಅನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.4 ಬೆಡ್ ರೂಂಗಳ ಅಪಾರ್ಟ್ ಮೆಂಟ್ ಗಳು, ವಾಣಿಜ್ಯ ಸಂಕೀರ್ಣಗಳು ಮನೋರಂಜನಾ ಸಂಕೀರ್ಣ, ಜಿಮ್ ಸೇರಿದಂತೆ ಇನ್ನಿತರೆ ಜನೋಪಯೋಗಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

NEWS DESK

TIMES OF BENGALURU