ಚಿತ್ರರಂಗವನ್ನು ಕೈಗಾರಿಕಾ ವಲಯವೆಂದು ಘೋಷಿಸಿ

ಕನ್ನಡ ಸಿನಿಮಾ ಪ್ರದರ್ಶಕರು ಹಲವು ಬೇಡಿಕೆಗಳ ಪಟ್ಟಿಯೊಂದನ್ನು ಮತ್ತೊಮ್ಮೆ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಕೊರೋನಾ ಹಾಗೂ ಲಾಕ್‌ಡೌನ್ ಕಾರಣಕ್ಕೆ ಚಿತ್ರಮಂದಿರಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿವೆ. ಇದರಿಂದ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

ಹೀಗಾಗಿ ಆಸ್ತಿ ತೆರಿಗೆಯಲ್ಲಿ ವಿನಾಯಿತಿ, ಮಾಸಿಕ ವಿದ್ಯುತ್ ಹಾಗೂ ನೀರಿನ ಬಿಲ್‌ನಲ್ಲಿ ವಿನಾಯಿತಿ ನೀಡಬೇಕು. ಚಿತ್ರಮಂದಿರಗಳಲ್ಲಿ ದುಡಿಯುವ ಕಾರ್ಮಿಕರಿಗೆ ಈ ಕೆಲಸ ಇಲ್ಲದ ಕಾರಣ ಅವರನ್ನು ಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ ಅವರಿಗೆ ಧನಸಹಾಯ ನೀಡುವುದು ಹಾಗೂ ಚಿತ್ರರಂಗವನ್ನು ಕೈಗಾರಿಕಾ ವಲಯ ಎಂದು ಘೋಷಣೆ ಮಾಡಬೇಕು ಎಂಬುದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಮನವಿ ಸಲ್ಲಿಸಿದ್ದಾರೆ.

NEWS DESK

TIMES OF BENGALURU