ಕಬ್ಬು ಬೆಳೆಗಾರರ ನೆರವಿಗೆ ನಿಂತ ಎಂಟಿಬಿ

ಬೆಂಗಳೂರು ಗ್ರಾಮಾಂತರ: ಕೋವಿಡ್-19 ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಕಬ್ಬು ಬೆಳೆಗಾರರ ನೆರವಿಗೆ ಮುಂದಾಗಿರುವ ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ವಿಶ್ವವನ್ನೆ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಎರಡನೇ ಅಲೆಯಿಂದಾಗಿ ಇತರ ವಲಯಗಳಂತೆ ಕೃಷಿ ಚಟುವಟಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ ಅದರಲ್ಲೂ ಕಬ್ಬು ಬೆಳೆಗಾರರು ತೀವ್ರತರವಾದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಕಬ್ಬು ಬಿಲ್ ಬಾಕಿ ಉಳಿಸಿಕೊಳ್ಳುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ತಕ್ಷಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

NEWS DESK

TIMES OF BENGALURU