ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ರಕ್ಷಣೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ.

ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಬಾಧಿತರಾದ ಮಕ್ಕಳನ್ನು ಗುರುತಿಸಲು ಹಾಗೂ ಪುನರ್ವಸತಿಗೆ ಸರ್ಕಾರ 1098 ಎಂಬ ಸಹಾಯವಾಣಿ ತಂದಿದ್ದು, ಹಿರಿಯ ಐಎಎಸ್ ಅಧಿಕಾರಿ ಮೋಹನ್ ರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಇಂಥ ಮಕ್ಕಳಿಗೆ ಕೌಟುಂಬಿಕ ವಾತಾವರಣ ಒದಗಿಸುವುದು ಸಚಿವೆಯಾಗಿ ನನ್ನ ಹಾಗೂ ನಮ್ಮ ಇಲಾಖೆ ಹಾಗೂ ನಮ್ಮ ಸರ್ಕಾರದ ಕರ್ತವ್ಯ ಎಂದರು.

NEWS DESK

TIMES OF BENGALURU