ಮೃತಪಟ್ಟ ಶಿಕ್ಷಕರಿಗೆ 50ಲಕ್ಷ ರೂ. ಪರಿಹಾರ ನೀಡಿ

ಬೆಂಗಳೂರು: ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಎಲ್ಲಾ ಶಿಕ್ಷಕರ ಕುಟುಂಬಗಳಿಗೆ ಕನಿಷ್ಠ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಬ್ಬ ಉತ್ತಮ ಶಿಕ್ಷಕರು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನೇ ರೂಪಿಸುತ್ತಾರೆ. ಆದರೆ ಈ ಕೋವಿಡ್ ಮಹಾಮಾರಿಯ ಸಮಯದಲ್ಲಿ ಕಲ್ಯಾಣ ಕರ್ನಾಟಕದಲ್ಲಿ 156 ಶಿಕ್ಷಕರು ಮೃತಪಟ್ಟಿರುವುದು ನಿಜಕ್ಕೂ ನೋವಿನ ಸಂಗತಿ. ಈ ಭಾಗಕ್ಕೆ ಆಗಿರುವ ತುಂಬಲಾರದ ನಷ್ಟ. ಈ ಎಲ್ಲ ಶಿಕ್ಷಕರ ಆತ್ಮಕ್ಕೆ ಶಾಂತಿ- ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

NEWS DESK

TIMES OF BENGALURU