ರಾಜ್ಯದಲ್ಲಿ ದಾಖಲೆಯ 58,395 ಮಂದಿ ಡಿಸ್ಚಾರ್ಜ್

ಬೆಂಗಳೂರು:ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿರುವ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಹೆಚ್ಚು ಇದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದು, ಒಂದು ದಿನದಲ್ಲಿ 30,309 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 58,395 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ. ಕೆ.ಸುಧಾಕರ್ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು. ಬೆಂಗಳೂರಿನಲ್ಲಿ 8,676 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 31,795 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

NEWS DESK

TIMES OF BENGALURU