525 ಮಂದಿ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು :  ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಾರ್ವಕಾಲಿಕ ದಾಖಲೆ ಸಂಖ್ಯೆಯ 525 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 298 ಮಂದಿ ಸೋಂಕಿತರು ಅಸುನೀಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 22,838ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 30,309 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,27,2374ಕ್ಕೆ ಏರಿಕೆಯಾಗಿದೆ. 58,395 ಮಂದಿ ಡಿಸ್ಚಾರ್ಜ್ ಆಗಿದ್ದು ಒಟ್ಟಾರೆ ಗುಣಮುಖಿತರ ಸಂಖ್ಯೆ 1,67,44,87ಕ್ಕೆ ತಲುಪಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,75,028ಕ್ಕೆ ಇಳಿಕೆಯಾಗಿದೆ.

NEWS DESK

TIMES OF BENGALURU