ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತ ಚಿಕಿತ್ಸೆ

ಬೆಂಗಳೂರು: ಬ್ಲ್ಯಾಕ್‌ ಫಂಗಸ್‌ ಕಾಯಿಲೆಗೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಚಿಕಿತ್ಸೆಗೆ ಬಳಸಲಾಗುವ ಔಷಧಿಗೆ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಬಂಟರ ಸಂಘವು ಹೋಮ್‌ ಐಸೋಲೇಷನ್‌ ಆಗಿರುವ ಕೋವಿಡ್‌ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ನಂತರ ಮಾಧ್ಯಮಗಳ ಜತೆ ಅವರು ಮಾತನಾಡುತ್ತಿದ್ದರು. ಬ್ಲ್ಯಾಕ್‌ ಫಂಗಸ್‌ ನ ಚಿಕಿತ್ಸೆಗೆ ಈಗಾಗಲೇ ಕೇಂದ್ರದಿಂದ 1000 ವೈಲ್ಸ್‌ ಬಂದಿದೆ. ಈ ಔಷಧಿಯ ಕೊರತೆ ನೀಗಿಸಲು ಸರಕಾರ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ ಎಂದು ತಿಳಿಸಿದರು.

NEWS DESK

TIMES OF BENGALURU