ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ 468 ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಹಾಮಾರಿಗೆ ಇಂದು 468 ಜೀವಗಳು ಬಲಿಯಾಗಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34281 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2306655 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 23306ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 11772 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 218 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1084844 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 10238 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

NEWS DESK

TIMES OF BENGALURU