ಲಾಕ್ ಡೌನ್ ಉಲ್ಲಂಘನೆ: 941 ವಾಹನಗಳು ಸೀಜ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಿಳಿದ ಸುಮಾರು 941 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ ಕರ್ಪ್ಯೂ ಸಮಯದಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 870 ದ್ವಿಚಕ್ರ ವಾಹನ, 37 ದ್ವಿಚಕ್ರ ವಾಹನ, 34 ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಒಟ್ಟು 941 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಆರು ಎನ್ ಡಿ ಎಂ ಎ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ 941 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹೆಚ್ಚಳವಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಮೇ 24ರವರೆಗೆ ಲಾಕ್ ಡೌನ್ ಜಾರಿಗೊಳಿಸಿದೆ.

NEWS DESK

TIMES OF BENGALURU