ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ಬಂದ್

ಬೆಂಗಳೂರು : ನಗರದಲ್ಲಿ ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆ ಸೋಂಕಿತರ ಅಂತ್ಯ ಸಂಸ್ಕಾರಕ್ಕಾಗಿ ಚಿತಾಗಾರಗಳಿಗಾಗಿ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರೋದಾಗಿ ಬಿಬಿಎಂಪಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ತುರ್ತು ದುರಸ್ಥಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಸದರಿ ಚಿತಾಗಾರವನ್ನು ದಿನಾಂಕ: 20/05/2021 ರಿಂದ 27/05/2021(8 ದಿನಗಳು) ರವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ ಎಂದು ತಿಳಿಸಿದೆ.

NEWS DESK

TIMES OF BENGALURU