ರೆಮ್‌ಡಿಸಿವಿರ್ ಮಾರಾಟ: ವಾರ್ಡ್ ಬಾಯ್ ಅರೆಸ್ಟ್

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪೂರೈಸಲಾದ ರೆಮ್‌ಡಿಸಿವಿರ್ ಚುಚ್ಚುಮದ್ದುಗಳನ್ನು ಕಳವು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪಶ್ಚಿಮ ವಿಭಾಗ ಪೊಲೀಸರು ಪತ್ತೆ ಮಾಡಿದ್ದಾರೆ.ಕಳವು ಮಾಡಿದ್ದ ಚುಚ್ಚುಮದ್ದುಗಳನ್ನು ಕೆ.ಪಿ. ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಮಾರಾಟ ಮಾಡಲು ಬಂದಿದ್ದ ಬಾಲಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ಜಾಲದ ಮಾಹಿತಿ ಬಾಯ್ಬಿಟ್ಟಿದ್ದಾನೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಕ, ಕೊರೊನಾ ಸೋಂಕಿತ ಸಂಬಂಧಿಯೊಬ್ಬರಿಗೆ ದುಬಾರಿ ಬೆಲೆಗೆ ಚುಚ್ಚುಮದ್ದು ಮಾರಲು ಬಂದಾಗ ಸಿಕ್ಕಿಬಿದ್ದಿದ್ದಾನೆ. ಆತನಿಂದ ಚುಚ್ಚುಮದ್ದಿನ 8 ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ. ಆತನ ಜೊತೆ ಹಲವರು ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನವಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

NEWS DESK

TIMES OF BENGALURU