ಅನಾಥ ಮಕ್ಕಳ ಶಿಕ್ಷಣದ ಜವಾಬ್ದಾರಿವಹಿಸಿಕೊಂಡ ಮಠ

ಬೆಂಗಳೂರು: ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಸಾಂಕ್ರಮಿಕ ರೋಗದಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಮುಂದಾಗಿದೆ.

ಕೋವಿಡ್ ಎರಡನೇ ಅಲೆಯಿಂದ ತೀವ್ರತರವಾದ ಸಂಕಷ್ಟವನ್ನು ಜನರು ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಅನಾಥರಾಗಿರುವ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮಠದ ವತಿಯಿಂದ ವಹಿಸಿಕೊಳ್ಳಲಾಗುವುದು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ತಿಳಿಸಿದ್ದಾರೆ.

NEWS DESK

TIMES OF BENGALURU