ಬ್ಲ್ಯಾಕ್ ಫಂಗಸ್‌ ಸಾಂಕ್ರಾಮಿಕ ರೋಗ ಎಂದು ಘೋಷಿಸಿ

ನವದೆಹಲಿ: ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಈಗ ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್‌ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೂ ಪತ್ರವನ್ನು ಕಳುಹಿಸಿದೆ. ಈ ಪತ್ರದಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ನ್ಯೂಕೋರ್ಮಿಕೋಸಿಸ್ ರೋಗವನ್ನು “ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸೂಚಿಸಬಹುದಾದ ಕಾಯಿಲೆ” ಎಂದು ತಿಳಿಸಲಾಗಿದೆ. ಹೀಗೆ ರಾಜ್ಯ ಸರ್ಕಾರಗಳು ಘೋಷಣೆ ಮಾಡಿದ ನಂತರ ದೃಢಪಟ್ಟ ಬ್ಲ್ಯಾಕ್ ಫಂಗಸ್‌ ಪ್ರಕರಣ ಹಾಗೂ ಶಂಕಿತ ಪ್ರಕರಣಗಳ ಬಗ್ಗೆ ಆರೋಗ್ಯ ಸಚಿವಾಲಯಕ್ಕೆ ವರದಿಯನ್ನು ಮಾಡಬೇಕಿದೆ.

NEWS DESK

TIMES OF BENGALURU